ಚಾಲೆಂಜಿಂಗ್ ಸ್ಟಾರ್ ಅಭಿನಯದ ‘ಮುನಿರತ್ನ ಕುರುಕ್ಷೇತ್ರ’ ನಾಲ್ಕು ಭಾಷೆಗಳಲ್ಲಿ ಬಿಡುಗಡೆ

ಚಾಲೆಂಜಿಂಗ್ ಸ್ಟಾರ್ ಅಭಿನಯದ ‘ಮುನಿರತ್ನ ಕುರುಕ್ಷೇತ್ರ’ ನಾಲ್ಕು ಭಾಷೆಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದು ತಿಳಿಸಿದ್ದ ಚಿತ್ರ ತಂಡ ಇಂದು ನಾಲ್ಕು ಭಾಷೆಯ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಶೀಘ್ರದಲ್ಲಿಯೇ ಸಿನಿಮಾ ಬಿಡುಗಡೆ ಆಗಲಿದೆ ಎಂಬ ಸಿಹಿ ಸುದ್ದಿ ನೀಡಿದೆ.
ಈ ವರ್ಷದ ಮೊದಲ ವಾರದಲ್ಲಿ‌ಚಿತ್ರ ಬಿಡುಗಡೆ ಆಗಲಿದೆ ಎನ್ನಲಾಗುತ್ತಿತ್ತು. ಆದ್ರೆ ನಿರ್ದೇಶಕರು ಪ್ರತಿ ಫ್ರೇಮ್‍ನಲ್ಲಿಯಲ್ಲಿ ಅಚ್ಚುಕಟ್ಟು ಬಯಸುತ್ತಿರುವದರಿಂದ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಲಾಗಿದೆ. ಜತೆಗೆ ನಾಲ್ಕು ಭಾಷೆಗಳಲ್ಲಿ ಡಬ್ಬಿಂಗ್ ಕೆಲಸ ನಡೆಯುತ್ತಿದ್ದರಿಂದ ಸಿನಿಮಾ ರಿಲೀಸ್ ತಡವಾಗುತ್ತಿದೆ ಎಂದು ನಿರ್ಮಾಪಕ ಮುನಿರತ್ನ ಸುದ್ದಿಗೋಷ್ಠಿಯಲ್ಲಿ ಈ ಹಿಂದೆ ತಿಳಿಸಿದ್ದರು. ಏ. 23ರಂದು‌ ಫೇಸ್‍ಬುಕ್ ಪೋಸ್ಟ್ ಮೂಲಕ ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಯಲ್ಲಿ ಪೋಸ್ಟರ್ ಬಿಡುಗಡೆಗೊಳಿಸಿದೆ.
ಚಿತ್ರದಲ್ಲಿ ರವಿಚಂದ್ರನ್, ಅರ್ಜುನ್ ಸರ್ಜಾ, ಶಶಿಕುಮಾರ್, ನಿಖಿಲ್ ಕುಮಾರಸ್ವಾಮಿ, ಭಾರತಿ ವಿಷ್ಣುವರ್ಧನ್, ಮೇಘನಾ ರಾಜ್, ಹರಿಪ್ರಿಯಾ ಸೇರಿದಂತೆ ನೂರಾರು ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ.