ಬಿಗ್ ಬಾಸ್ ಸೀಸನ್- 5 ವಿನ್ನರ್ ಕನ್ನಡದ ರ್ಯಾಪರ್ ಚಂದನ್ ಶೆಟ್ಟಿ ಹಾಗೂ ಬಾರ್ಬಿ ಡಾಲ್ ನಿವೇದಿತಾ ಗೌಡ ಮದುವೆ ದಿನಾಂಕ ಫಿಕ್ಸ್ ಆಗಿದೆ.
ನಿವೇದಿತಾಗೆ ಚಂದನ್ ಶೆಟ್ಟಿ ಬಹಿರಂಗವಾಗಿಯೇ ಪ್ರಪೋಸ್ ಮಾಡಿ ಕೈಗೆ ಉಂಗುರ ತೊಡಿಸಿಬಿಟ್ಟರು.ಇದಾದ ಮೇಲೆ ಕುಟುಂಬದವರ ಸಮ್ಮತಿಯೊಂದಿಗೆ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ನಿಶ್ಚಿತಾರ್ಥ ಮಾಡಿಕೊಂಡರು. ಮದುವೆ ಇನ್ನೂ ಲೇಟ್ ಎನ್ನುತ್ತಿದ್ದ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಈಗ ಬ್ರೇಕಿಂಗ್ ನ್ಯೂಸ್ ಕೊಟ್ಟಿದ್ದಾರೆ.
ಇತ್ತೀಚೆಗೆ ಸಂದರ್ಶನವೊಂದಲ್ಲಿ ಮಾತನಾಡಿದ ನಿವೇದಿತಾ ಗೌಡ ತಮ್ಮ ಮದುವೆ ದಿನಾಂಕವನ್ನು ಅಧಿಕೃತವಾಗಿ ತಿಳಿಸಿದ್ದಾರೆ. ಚಂದನ್ ಹಾಗೂ ನಿವೇದಿತಾ ಮುಂದಿನ ತಿಂಗಳು ಫೆಬ್ರವರಿ 25 ಮತ್ತು 26 ರಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಇವರ ಮದುವೆ ಮೈಸೂರಿನ ಕನ್ವೆನ್ಶನ್ ಹಾಲ್ನಲ್ಲಿ ನಡೆಯಲಿದೆ. ಹೀಗಾಗಿ ಈಗಿನಿಂದಲೇ ಎರಡು ಮನೆಯವರು ಮದುವೆಯ ತಯಾರಿ ನಡೆಸುತ್ತಿದ್ದಾರೆ.