ನಾಳೆ ಕಾಪು ಶ್ರೀ ಹಳೇ ಮಾರಿಗುಡಿ ದೇವಸ್ಥಾನದಲ್ಲಿ ಚಂಡಿಕಾಯಾಗ, ಅನ್ನಸಂತರ್ಪಣೆ

ಕಾಪು: ಕಾಪು ಶ್ರೀ ಹಳೆ ಮಾರಿಯಮ್ಮ ದೇವಸ್ಥಾನದಲ್ಲಿ ವರ್ಷಂಪ್ರತಿಯಂತೆ ಶ್ರೀ ಶರನ್ನವರಾತ್ರಿ ಮಹೋತ್ಸವದ ಪ್ರಯುಕ್ತ ಜರಗುವ ಚಂಡಿಕಾಯಾಗ ಪೂರ್ಣಾಹುತಿಯು ಅ. 31ರಂದು ನಡೆಯಲಿದೆ.

ಮಂಗಳವಾರ ಬೆಳಗ್ಗೆ 8 ಗಂಟೆಗೆ ಪ್ರಾರ್ಥನೆ, 11.30ಕ್ಕೆ ಚಂಡಿಕಾಯಾಗ ಪೂರ್ಣಾಹುತಿ, ಮಧ್ಯಾಹ್ನ 12ಗಂಟೆಗೆ ಅನ್ನಸಂತರ್ಪಣೆ, ಸಂಜೆ 3ಗಂಟೆಗೆ ದರ್ಶನ ಸೇವೆ ನಡೆಯಲಿದೆ ಎಂದು ಕಾಪು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಪ್ರಸಾದ್‌ ಜಿ. ಶೆಣೈ ಮತ್ತು ಕಾಪು ಪೇಟೆಯ ಹತ್ತು ಸಮಸ್ತರ ಜಂಟಿ ಪ್ರಕಟನೆ ತಿಳಿಸಿದೆ