ಬ್ರಹ್ಮಾವರ: ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ತಾಲೂಕು ಚಾಂತಾರು ಗ್ರಾಮದ ರಥಬೀದಿಯ ದೇವಾಡಿಗರ ಬೆಟ್ಟು ಎಂಬಲ್ಲಿ ಶನಿವಾರ ಬೆಳಕಿಗೆ ಬಂದಿದೆ.
ಚಾಂತಾರು ಗ್ರಾಮದ ದೇವಾಡಿಗರ ಬೆಟ್ಟು ನಿವಾಸಿ 38 ವರ್ಷದ ಉದಯ ನೇಣಿಗೆ ಶರಣಾದ ವ್ಯಕ್ತಿ. ಇವರು ಫೈಂಟಿಂಗ್ ಕೆಲಸ ಮಾಡಿಕೊಂಡಿದ್ದು, ಸುಮಾರು 15 ವರ್ಷಗಳಿಂದ ಮಾನಸಿಕ ಸ್ಥಿಮಿತವನ್ನು ಕಳೆದುಕೊಂಡಿದ್ದರು. ಇದೇ ಖಿನ್ನತೆಯಲ್ಲಿ ಬಳಲುತ್ತಿದ್ದ ಉದಯ್, ಫೆ.4ರ ರಾತ್ರಿ 8:45 ರಿಂದ ಫೆ.5ರ ಬೆಳಿಗ್ಗೆ 8:30 ರ ಮಧ್ಯ ಅವಧಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.