ಚಂಡೀಗಡ: ಪಂಜಾಬ್ನ ನೂತನ ಮುಖ್ಯಮಂತ್ರಿಯಾಗಿ ಚರಣ್ಜೀತ್ ಸಿಂಗ್ ಚನ್ನಿ ಅವರು ಆಯ್ಕೆಯಾಗಿದ್ದಾರೆ.
ಚರಣ್ಜೀತ್ ಸಿಂಗ್ ಚನ್ನಿ ಅವರು ಪಂಜಾಬ್ ಕಾಂಗ್ರೆಸ್ನ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲು ಹರ್ಷಪಡುತ್ತೇನೆ ಎಂದು ಪಕ್ಷದ ನಾಯಕ ಹರೀಶ್ ರಾವತ್ ಟ್ವೀಟ್ ಮಾಡಿದ್ದಾರೆ.
ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಅಮರಿಂದರ್ ಸಿಂಗ್ ಶನಿವಾರ ರಾಜೀನಾಮೆ ನೀಡಿದ್ದರು.