ಚಾರ್ಮಾಡಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಚಿಕ್ಕಮಗಳೂರು: ಭಾರೀ ಮಳೆ ಹಾಗೂ ಭೂ ಕುಸಿತ ಉಂಟಾದ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟಿ ಮಾರ್ಗದಲ್ಲಿ (ಎನ್‌.ಎಚ್‌–173) ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಲಘು ವಾಹನಗಳು ಹಗಲಿನಲ್ಲಿ ಮಾತ್ರ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.

ಕೆಎಸ್‌ಆರ್‌ಟಿಸಿ ಸಾಮಾನ್ಯ ಬಸ್‌, ಲಾರಿ, ಟೆಂಪೊ ಟ್ರಾವಲರ್, ಆಂಬುಲೆನ್ಸ್, ಕಾರು, ಜೀಪು, ವ್ಯಾನ್, ಮಿನಿ ವ್ಯಾನ್, ದ್ವಿಚಕ್ರ ವಾಹನಗಳು ಬೆಳಿಗ್ಗೆ 6ರಿಂದ ಸಂಜೆ 7 ಗಂಟೆವರೆಗೆ ಸಂಚರಿಸಲು ಅವಕಾಶ ಇದೆ.

ಭಾರಿ ವಾಹನಗಳ ಸಂಚಾರಕ್ಕೆ ಪೂರ್ಣ ನಿರ್ಬಂಧಿಸಲಾಗಿದೆ. ಈ ನಿರ್ಬಂಧವು ಮುಂದಿನ ಆದೇಶದವರೆಗೆ ಜಾರಿಯಲ್ಲಿ ಇರುತ್ತದೆ ಎಂದು ಜಿಲ್ಲಾಧಿಕಾರಿ ಕೆ.ಎನ್‌.ರಮೇಶ್‌ ತಿಳಿಸಿದ್ದಾರೆ.