ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದ ಅಂತಾರಾಷ್ಟ್ರೀಯ ಖ್ಯಾತಿಯ ಬಾಣಸಿಗ ವಿಕಾಸ್ ಖನ್ನಾ

ಉಡುಪಿ: ಅಂತಾರಾಷ್ಟ್ರೀಯ ಪ್ರಸಿದ್ಧಿಯ ಬಾಣಸಿಗ ಚಿತ್ರನಿರ್ಮಾಪಕ ವಿಕಾಸ್ ಖನ್ನಾ ಶ್ರೀಕೃಷ್ಣಮಠಕ್ಕಾಗಮಿಸಿ ದೇವರ ದರ್ಶನ ಪಡೆದುಕೊಂಡು ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಇವರಿಂದ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಸ್ವಾಗತ ಸಮಿತಿ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಮಣಿಪಾಲದ ವೆಲ್ಕಮ್ ಗ್ರೂಪ್ ಹೋಟೆಲ್ ನ ಡಾ.ಕೆ.ತಿರುಗ್ನಾನಾಸಂಬಂತಮ್ ಮೊದಲಾದವರು ಉಪಸ್ಥಿತರಿದ್ದರು.