ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಮುಖ್ಯಸ್ಥರನ್ನು ರಾಜ್ಯ ಸರ್ಕಾರ ಬದಲಾವಣೆ ಮಾಡಿದೆ.
ಸಿಐಡಿ ಐಜಿಪಿ ಚೇತನ್ ಸಿಂಗ್ ರಾಥೋಡ್ ಅವರನ್ನು ನೂತನ ಎಸ್ಐಟಿ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ಇದೇ ವೇಳೆ ಹಾಸನ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿಧಿ ಅವರನ್ನು ಎಸ್ಐಟಿ ಸದಸ್ಯರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಎಸ್ಐಟಿ ಮುಖ್ಯಸ್ಥ ಸ್ಥಾನದಿಂದ ತಮ್ಮನ್ನು ಕೈಬಿಡುವಂತೆ ಐಜಿಪಿ ಶಶಿಕುಮಾರ್ ಮತ್ತು ವೆಂಕಟೇಶ್ ಪ್ರಸನ್ನ ಅವರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಈ ಮನವಿಯನ್ನು ಪರಿಗಣಿಸಿರುವ ಸರ್ಕಾರ, ಇಬ್ಬರನ್ನೂ ಎಸ್ಐಟಿಯಿಂದ ಕೈಬಿಟ್ಟು ಅವರ ಸ್ಥಾನಗಳಿಗೆ ಚೇತನ್ ಸಿಂಗ್ ರಾಥೋಡ್ ಹಾಗೂ ಶ್ರೀನಿಧಿ ಅವರನ್ನು ನೇಮಕ ಮಾಡಿದೆ.
ಈಗಾಗಲೇ ಪ್ರಕರಣದ ಮರುತನಿಖೆ ಚುರುಕುಗೊಂಡಿರುವ ಸಂದರ್ಭದಲ್ಲಿ ಎಸ್ಐಟಿ ತಂಡದಲ್ಲಿ ನಡೆದಿರುವ ಈ ಬದಲಾವಣೆ ಮಹತ್ವ ಪಡೆದುಕೊಂಡಿದೆ.















