ಮೇ 31-ಜೂನ್ 01: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಉಡುಪಿ: ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಮೇ 31 ಹಾಗೂ ಜೂನ್ 01 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಮೇ 31 ರಂದು ರಾತ್ರಿ ಉಡುಪಿಗೆ ಆಗಮಿಸಿ, ವಾಸ್ತವ್ಯ ಮಾಡಲಿದ್ದಾರೆ. ಜೂನ್ 01 ರಂದು ಬೆಳಗ್ಗೆ 10:30 ಕ್ಕೆ ಕಾರ್ಕಳ ತಾಲ್ಲೂಕಿನ ಎಣ್ಣೆಹೊಳೆ ಏತ ನೀರಾವರಿ ಯೋಜನೆ ಉದ್ಘಾಟಿಸಿ, ಮಧ್ಯಾಹ್ನ 12 ಗಂಟೆಗೆ ಹೆಬ್ರಿ ತಾಲ್ಲೂಕಿನಲ್ಲಿ ತಾಲ್ಲೂಕು ಆಡಳಿತ ಸೌಧದ ನೂತನ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತರಗತಿ ಕೊಠಡಿಗಳ ನಿರ್ಮಾಣ ಮತ್ತು ಹೆಬ್ರಿ ಬಸ್
ನಿಲ್ದಾಣ ಕಾಮಗಾರಿಗಳ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಿದ ಬಳಿಕ ಮೂಡುಬಿದಿರೆಗೆ ತೆರಳಲಿರುವರು ಎಂದು ಪ್ರಕಟನೆ ತಿಳಿಸಿದೆ.