ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬದ ಸದಸ್ಯರಿಗೆ ವಿತರಿಸಲಾದ ಮುಖ್ಯಮಂತ್ರಿ ಆರೋಗ್ಯ ವಿಮಾ ಕಾರ್ಡ್ ಅನ್ನು ಪ್ರತೀ ವರ್ಷದಂತೆ ಈ ವರ್ಷವೂ ನವೀಕರಿಸಲಾಗುತ್ತಿದ್ದು, ಕಾರ್ಡ್ ಹೊಂದಿರುವ ಕುಟುಂಬದ ಯಾವುದಾದರೂ ಸದಸ್ಯರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ಬಗ್ಗೆ ಮುಚ್ಚಳಿಕೆ ಪತ್ರ ಹಾಗೂ ಹಳೆ ಆರೋಗ್ಯ ಕಾರ್ಡ್ ಪ್ರತಿಯೊಂದಿಗೆ ಜುಲೈ 1 ರ ಒಳಗಾಗಿ ಉಡುಪಿ ನಗರಸಭಾ ಕಛೇರಿಗೆ ಹಾಜರಾಗಿ ದಾಖಲೆಗಳನ್ನು ಸಲ್ಲಿಸಬೇಕು.
ದಾಖಲೆ ಸಲ್ಲಿಸಿದವರ ಕಾರ್ಡ್ಗಳನ್ನು ಮಾತ್ರ ನವೀಕರಿಸಲಾಗುವುದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

















