ನ. 25 ರಂದು ಅಂಬಲಪಾಡಿ ದೇವಸ್ಥಾನದಲ್ಲಿ ಚಿಗುರು ಸಾಂಸ್ಕೃತಿಕ ಕಾರ್ಯಕ್ರಮ

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಮತ್ತು ತಾಲೂಕು ಘಟಕದ ಸಹಯೋಗದೊಂದಿಗೆ ಚಿಗುರು ಬಾಲ ಪ್ರತಿಭೆಗಳ ಸಾಂಸ್ಕೃತಿಕ ಕಾರ್ಯಕ್ರಮವು ನವೆಂಬರ್ 25 ರಂದು ಮಧ್ಯಾಹ್ನ 2.30 ಕ್ಕೆ ನಗರದ ಅಂಬಲಪಾಡಿ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಅಂಬಲಪಾಡಿ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ. ನಿ.ಬಿ ವಿಜಯ ಬಲ್ಲಾಳ ಉದ್ಘಾಟಿಸಲಿದ್ದು, ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.

ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಅಂಬಲಪಾಡಿ ವಾರ್ಡಿನ ನಗರಸಭಾ ಸದಸ್ಯ ಹರೀಶ್ ಶೆಟ್ಟಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಸ್ಯಾಕ್ಸೋಫೋನ್, ಕೊಳಲು ವಾದನ, ಸುಗಮ ಸಂಗೀತ, ಜಾನಪದ ಗಾಯನ, ಸಮೂಹ ನೃತ್ಯ, ಏಕ ಪಾತ್ರಾಭಿನಯ, ನಾಟಕ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.