ಪ್ರಾಥಮಿಕ ಆರೋಗ್ಯ ಕೇಂದ್ರದ ಶಿಶುಪಾಲನ ಕೇಂದ್ರ ಉದ್ಘಾಟನೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಹಿಳಾ ಮಂಡಳಿಗಳ ಒಕ್ಕೂಟ ಮತ್ತು ರೋಟರಿ ಕ್ಲಬ್ ಅಂಬಲಪಾಡಿ ಇವರ ಸಹಯೋಗದಲ್ಲಿ ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಿರ್ಮಿಸಿರುವ ಶಿಶುಪಾಲನಾ ಕೇಂದ್ರವನ್ನು ಶಾಸಕ ಕೆ. ರಘುಪತಿ ಭಟ್ ಉದ್ಘಾಟಿಸಿ, ಪೂರ್ಣ ಪ್ರಮಾಣದಲ್ಲಿ ಇದರ ಉಪಯೋಗ ಆಗಲಿ ಎಂದು ಶುಭ ಹಾರೈಸಿದರು.

ಜಿಲ್ಲಾ ಮಹಿಳಾ ಮಂಡಳಿಗಳ ಒಕ್ಕೂಟದ ಕಾರ್ಯದರ್ಶಿ ವಸಂತಿ ರಾವ್ ಕೊರಡ್ಕಲ್ ಪ್ರಾಸ್ತವಿಕ ನುಡಿಗಳನ್ನಾಡಿದರು.

ಜಿಲ್ಲಾ ಮಹಿಳಾ ಮಂಡಳಿಗಳ ಅಧ್ಯಕ್ಷೆ ಶ್ರೀಮತಿ ಸರಳಾ.ಬಿ. ಕಾಂಚನ್, ರೋಟರಿ ಕ್ಲಬ್ ಅಂಬಲಪಾಡಿ ಅಧ್ಯಕ್ಷ ರೊಟೇರಿಯನ್ ಭಾಸ್ಕರ್ ಶೆಟ್ಟಿಗಾರ್, ರೊಟೇರಿಯನ್ ದಯಾನಿಧಿ ಶೆಟ್ಟಿಗಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ವೀಣಾ ವಿವೇಕಾನಂದ, ತಾಲೂಕು ವೈದ್ಯಾಧಿಕಾರಿ ಡಾ. ವಾಸುದೇವ ಉಪಧ್ಯಾಯ ಉಪಸ್ಥಿತರಿದ್ದರು.

ಮಹಿಳಾ ಶಕ್ತಿ ಕೇಂದ್ರದ ಯೋಜನಾ ಸಂಯೋಜಕಿ ಶ್ರೀಮತಿ ಅನುಷಾ ಕಾರ್ಯಕ್ರಮವನ್ನು ನಿರೂಪಿಸಿ, ಶಿಶುಪಾಲನಾ ಕೇಂದ್ರದ ಶಿಕ್ಷಕಿ ಶ್ರೀಮತಿ ರೇವತಿ ಸ್ವಾಗತಿಸಿ ಶಿಶುಪಾಲನಾ ಕೇಂದ್ರದ ಸಹಾಯಕಿ ಶ್ರೀಮತಿ ರಾಜೀವಿ ವಂದಿಸಿದರು.
ಶಿಶುಪಾಲನಾ ಕೇಂದ್ರದ ದೂರವಾಣಿ ಸಂಖ್ಯೆ -0820- 2536394