ಬಾಲ ಗೌರವ ಪ್ರಶಸ್ತಿ: ಅವಧಿ ವಿಸ್ತರಣೆ

ಉಡುಪಿ: ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ವತಿಯಿಂದ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಗೆ ಬಾಲಗೌರವ ಪ್ರಶಸ್ತಿ ಹಾಗೂ ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಏಪ್ರಿಲ್ 18 ರ ವರೆಗೆ ವಿಸ್ತರಿಸಲಾಗಿದೆ.

ಕ್ರೀಡಾ, ನೃತ್ಯ, ಸಂಗೀತ, ಸಾಹಿತ್ಯ, ಕರಕುಶಲ, ಚಿತ್ರಕಲೆ ಕ್ಷೇತ್ರಗಳಲ್ಲಿ ಹಾಗೂ ಬಹುಮುಖ ಪ್ರತಿಭೆ, ನಾಟಕ ಕ್ಷೇತ್ರದಂತಹ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಪ್ರಶಸ್ತಿ ಪುರಸ್ಕೃತ ಮಕ್ಕಳು ಸ್ವಯಂ ದೃಢೀಕೃತ ನಕಲು, ಸ್ವವಿವರ, ದಾಖಲೆಗಳೊಂದಿಗೆ ಹಾಗೂ 2021 ರ ಜನವರಿಯಿಂದ ಡಿಸೆಂಬರ್‌ವರೆಗೆ ಪ್ರಕಟಗೊಂಡ ಸ್ವ-ರಚಿತ ಮಕ್ಕಳ ಸಾಹಿತ್ಯದ ಕೃತಿಗಳ (ಮಕ್ಕಳೇ ರಚಿಸಿದ) 4 ಪ್ರತಿಯೊಂದಿಗೆ ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇ-ಔಟ್ ಹಿಂಭಾಗ, ಕೆ.ಹೆಚ್.ಬಿ ಕಾಲೋನಿ, ಲಕಮನಹಳ್ಳಿ, ಧಾರವಾಡ- 580004 ವಿಳಾಸಕ್ಕೆ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವಾಗ ಅಕಾಡೆಮಿ ಬಾಲಗೌರವ ಪ್ರಶಸ್ತಿ ಅರ್ಜಿ ಎಂದು ಲಕೋಟೆ ಮೇಲೆ ನಮೂದಿಸಿರಬೇಕು.

ಹೆಚ್ಚಿನ ಮಾಹಿತಿಗೆ ದೂ.ಸಂ:0836- 2461666 ನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.