ಕ್ರೈಸ್ಟ್‍ಕಿಂಗ್: ಗಾಂಧಿ ಜಯಂತಿ ಆಚರಣೆ

ಕಾರ್ಕಳ: ಇಲ್ಲಿನ ಕ್ರೈಸ್ಟ್‍ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರು ಶಾಸ್ತ್ರೀ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಸಂಸ್ಥೆಯ ಪದವಿಪೂರ್ವ ವಿಭಾಗದ ಪ್ರಾಚಾರ್ಯರಾದ ಲಕ್ಷ್ಮೀ ನಾರಾಯಣ ಕಾಮತ್, ಪ್ರೌಢಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ಜೋಸ್ನಾ ಸ್ನೇಹಲತಾ, ಹಿರಿಯ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಐ.ಕ್ರಿಸ್ಟೋಫರ್ ಕೋಟ್ಯಾನ್, ಕಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಜಾಲಿ ಜೇಕಬ್ ಅತಿಥಿಗಳಾಗಿದ್ದರು.

ಈ ಸಂದರ್ಭದಲ್ಲಿ ಅತಿಥಿಗಳು ಹಾಗೂ ಶಾಲಾ ಸಿಬ್ಬಂದಿಗಳು ಮಹಾತ್ಮ ಗಾಂಧೀಜಿ ಹಾಗೂ ಲಾಲ್‍ಬಹದ್ದೂರು ಶಾಸ್ತ್ರೀ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಗೌರವ ನಮನ ಸಲ್ಲಿಸಿದರು.

ಪ್ರಾಥಮಿಕ ಶಾಲಾ ಶಿಕ್ಷಕಿ ಶ್ರೀಮತಿ ಜಯಲಕ್ಷ್ಮೀ ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರ ಜೀವನಾದರ್ಶಗಳ ಕುರಿತು ಮಾತನಾಡಿದರು.

ಪ್ರೌಢಶಾಲಾ ಶಿಕ್ಷಕಿ ಶ್ರೀಮತಿ ಶ್ರುತಿರಾಜ್ ಕಾರ್ಯಕ್ರಮ ನಿರ್ವಹಿಸಿದರು.