ಕ್ರೈಸ್ಟ್ ಕಿಂಗ್: ಪ್ರಾಥಮಿಕ ಶಾಲಾ ಬ್ಯಾಡ್ಮಿಂಟನ್‍ನಲ್ಲಿ ಗ್ರಂಥ ಹಾಗೂ ಅಂಜನಿ ಕಾಮತ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ಶ್ರೀ ಭುವನೇಂದ್ರ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕಿಯರ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದುಕೊಂಡು ಜಿಲ್ಲಾಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ.
ತಂಡವನ್ನು ಪ್ರತನಿಧಿಸಿದ್ದ ಆಟಗಾರ್ತಿಯರಾದ ಎಂಟನೇ ತರಗತಿಯ ಗ್ರಂಥ ಹಾಗೂ ಏಳನೇ ತರಗತಿಯ ಅಂಜನಿ ಕಾಮತ್ ಈ ಮೂಲಕ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.