ಕಾರ್ಕಳ ಕ್ರೈಸ್ಟ್ ಕಿಂಗ್: ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಕಾರ್ಕಳ: ಇಲ್ಲಿನ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವ್ಯಕ್ತಿತ್ವ ವಿಕಸನ ತರಬೇತುದಾರ
ಕೀರ್ತನ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ವಿದ್ಯಾರ್ಥಿಗಳ ಜೊತೆ ಮಾತನಾಡುತ್ತಾ ಅವರು “ವಿದ್ಯಾರ್ಥಿಗಳು ಹಲವಾರು ಗುರಿಗಳನ್ನು ಇಟ್ಟುಕೊಂಡು ಪ್ರಯತ್ನಪಡುವುದಕ್ಕಿಂತ
ಒಂದೇ ಗುರಿಯನ್ನು ಇಟ್ಟುಕೊಂಡು ಅದನ್ನು ಸಾಧಿಸಲು ಏಕಾಗ್ರತೆ ಹಾಗೂ ಬದ್ಧತೆಯೊಂದಿಗೆ ಕಾರ್ಯಶೀಲರಾಗಬೇಕು. ನಮ್ಮಲ್ಲಿ ಅತ್ಯುತ್ತಮ ಕೌಶಲ್ಯಗಳಿದ್ದಾಗ ಅವಕಾಶಗಳು
ಹುಡುಕಿಕೊಂಡು ಬರುತ್ತವೆ. ಪ್ರಸ್ತುತ ಸಮಾಜದಲ್ಲಿ ಇರುವ ಅವಕಾಶಗಳಿಗೆ ತಕ್ಕಂತೆ ನಮ್ಮನ್ನು ನಾವು ರೂಪಿಸಿಕೊಳ್ಳಬೇಕು. ಸಾಧನೆಯ ದಾರಿಯಲ್ಲಿ ಸಾಗುವಾಗ ಎದುರಾಗುವ ಸೋಲುಗಳಿಗೆ ಅಳುಕದೆ ಮುಂದುವರಿಯಬೇಕು” ಎಂದು ಹೇಳಿದರು. ಸಂಸ್ಥೆಯ ಉಪ ಪ್ರಾಚಾರ್ಯ ಹಾಗೂ ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಡಾ.ಪ್ರಕಾಶ್ ಭಟ್ ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ವಿಯೋಲಾ ಸ್ಟ್ಯಾನ್ಲಿ ಅತಿಥಿಗಳನ್ನು ಪರಿಚಯಿಸಿ ಕೀರ್ತನ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.