ಕ್ರೈಸ್ಟ್ ಕಿಂಗ್: ವಿಶ್ವ ಸ್ಕೌಟ್ಸ್ ದಿನಾಚರಣೆ

ಕಾರ್ಕಳ: ಇಲ್ಲಿನ ಕ್ರೈಸ್ಟ್ ಕಿಂಗ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಸ್ಕೌಟ್ಸ್
ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸ್ಕೌಟ್ಸ್ ಮತ್ತು ಗೈಡ್ಸ್ನ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿಗಳಾದ ಗಣೇಶ್ ಜಾಲ್ಸೂರು ಅವರು ಸರ್ವ ಧರ್ಮ ಪ್ರಾರ್ಥನೆಯನ್ನು ನೆರವೇರಿಸಿಕೊಟ್ಟರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಉಪಾಧ್ಯಕ್ಷರಾದ ಶ್ರೀಮತಿ ಸಾವಿತ್ರಿ ಮನೋಹರ್‌ರವರು ವಿದ್ಯಾರ್ಥಿಗಳಿಗೆ ವಿವಿಧ ಹಾಡು ಹಾಗೂ ಚಟುವಟಿಕೆಗಳ ಮೂಲಕ ಸ್ಕೌಟ್ಸ್ ಮತ್ತು ಗೈಡ್ಸ್ನ ಕಾರ್ಯಯೋಜನೆಗಳ ಬಗ್ಗೆ ಅರಿವು ಮೂಡಿಸಿದರು.

ಕ್ರೈಸ್ಟ್ ಕಿಂಗ್ ವಿದ್ಯಾ ಸಂಸ್ಥೆಯ ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಶ್ರೀಮತಿ ಜೋಸ್ನಾ ಸ್ನೇಹಲತಾರವರು ಹಾಗೂ ಪ್ರಾಥಮಿಕ ವಿಭಾಗದ ಮುಖೋಪಾಧ್ಯಾಯರಾದ ರುಡಾಲ್ಪ್ ಕಿಶೋರ್ ಲೋಬೋರವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕಬ್ ಮತ್ತು ಬುಲ್ ಬುಲ್, ಬನ್ನೀಸ್, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಬೆಂಕಿ ಇಲ್ಲದೆ ಅಡುಗೆ, ಹೂಗುಚ್ಚ ತಯಾರಿ ಹಾಗೂ ಚಿತ್ರಕಲಾ ಚಟುವಟಿಕೆಗಳನ್ನು ಆಯೋಜಿಸಲಾಯಿತು. ಸ್ಕೌಟ್ಸ್ ಶಿಕ್ಷಕಿ ಶ್ರೀಮತಿ ಸುಮಂಗಲರವರು ಕಾರ್ಯಕ್ರಮವನ್ನು ನಿರೂಪಿಸಿದರು.