ಕುಂದಾಪುರ: ಇಲ್ಲಿನ ಹಂಚು ಕಾರ್ಮಿಕರ ಭವನದಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷ ಕೆ ಶಂಕರ್ ಧ್ವಜಾರೋಹಣ ನೆರವೇರಿಸಿದರು. ಕುಂದಾಪುರದ ಎಲ್ಲಾ ಹತ್ತು ಹಂಚು ಕಾರ್ಖಾನೆಗಳಲ್ಲಿ ಕೆಲಸಕ್ಕೂ ಮುನ್ನ ಕಾರ್ಖಾನೆ ಎದುರುಗಡೆ ಧ್ವಜಾರೋಹಣ ಮಾಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಘೋಷಣೆ ಮೊಳಗಿಸಿದರು.
ಸಿಐಟಿಯು ಮುಖಂಡ ಎಚ್ ನರಸಿಂಹ, ಮಹಾಬಲ ವಡೇರಹೋಬಳಿ, ಬಲ್ಕೀಸ್, ರಾಜು ದೇವಾಡಿಗ ಮುಂತಾದವರು ಉಪಸ್ಥಿತರಿದ್ದರು.
ಬೈಂದೂರು ಸಿಐಟಿಯು ಕಚೇರಿಯಲ್ಲಿ ಸಿಐಟಿಯು ಧ್ವಜಾರೋಹಣ ಶ್ರೀಧರ ಉಪ್ಪುಂದ ನೆರವೇರಿಸಿದರು. ಸಿಐಟಿಯು ಸಂಚಾಲಕ ರೊನಾಲ್ಡ್ ರಾಜೇಶ್ ಕ್ವಾಡ್ರಸ್ ಹಾಜರಿದ್ದರು.