ಉಡುಪಿ: ನಗರ ಸ್ಥಳೀಯ ಸಂಸ್ಥೆಯ ಅಧ್ಯಕ್ಷರು, ಉಪಾಧ್ಯಕ್ಷರ ಚುನಾವಣೆ; ಮೀಸಲಾತಿ ಪ್ರಕಟ

ಉಡುಪಿ: ಉಡುಪಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸಲು ರಾಜ್ಯ ಸರ್ಕಾರ ನಿರ್ದೇಶನ ನೀಡಿದ್ದು, ಈ ಕೆಳಕಂಡಂತೆ ಮೀಸಲಾತಿ ನಿಗದಿಪಡಿಸಲಾಗಿದೆ.

ಉಡುಪಿ ನಗರಸಭೆ:
ಉಡುಪಿ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ (ಎ) ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ (ಮಹಿಳೆ).

ಕುಂದಾಪುರ ಪುರಸಭೆ: ಕುಂದಾಪುರ ಪುರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ (ಮಹಿಳೆ) ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಅಭ್ಯರ್ಥಿ.

ಕಾಪು ಪುರಸಭೆ: ಕಾಪು ಪುರಸಭೆಯ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ (ಮಹಿಳೆ) ಅಭ್ಯರ್ಥಿ.

ಸಾಲಿಗ್ರಾಮ ಪಟ್ಟಣ ಪಂಚಾಯತ್: ಸಾಲಿಗ್ರಾಮ ಪಟ್ಟಣ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಬಿ (ಮಹಿಳೆ) ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ (ಮಹಿಳೆ) ಅಭ್ಯರ್ಥಿ.

ಕಾರ್ಕಳ ಪುರಸಭೆ:
ಕಾರ್ಕಳ ಪುರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ (ಮಹಿಳೆ) ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಮಹಿಳೆ ಅಭ್ಯರ್ಥಿ ನಿಗಧಿಯಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.