ತವಾಂಗ್ ನಲ್ಲಿ 300 ಕ್ಕೂ ಹೆಚ್ಚು ಚೀನೀ ಸೈನಿಕರ ಜೊತೆ ಕಾದಾಡಿ ಹಿಮ್ಮೆಟಿಸಿದ ಭಾರತೀಯ ಸೈನಿಕರು

ನವದೆಹಲಿ: ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿ ಭಾರತ ಮತ್ತು ಚೀನಾದ ಸೈನಿಕರ ನಡುವಿನ ಘರ್ಷಣೆ ಬಗ್ಗೆ ಮಂಗಳವಾರ ಸಂಸತ್ತಿನಲ್ಲಿ ಚರ್ಚೆಗೆ ಒತ್ತಾಯಿಸಲಾಗಿದ್ದು, ಗಡಿಯಲ್ಲಿನ ಪರಿಸ್ಥಿತಿಯ ಕುರಿತು ಹಲವಾರು ಕಾಂಗ್ರೆಸ್ ಸಂಸದರು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡುವಂತೆ ಒತ್ತಾಯಿಸಿದರು. ಡಿಸೆಂಬರ್ 9 ರಂದು ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನ ಯಾಂಗ್ಟ್ಸೆ ಪ್ರದೇಶದ ಸ್ಥಿತಿಯನ್ನು ಏಕಪಕ್ಷೀಯವಾಗಿ ಬದಲಾಯಿಸುವ ಚೀನಾದ ಪಿಎಲ್‌ಎಯ ಪ್ರಯತ್ನಗಳನ್ನು ಭಾರತೀಯ ಸೇನೆ ಧೈರ್ಯದಿಂದ ತಡೆದಿದೆ ಮತ್ತು ಅದನ್ನು ದೃಢವಾಗಿ ಎದುರಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಸಂಸತ್ತಿಗೆ ವಿವರಿಸಿದರು.

ಈ ಘರ್ಷಣೆಯಲ್ಲಿ ಭಾರತೀಯ ಸೇನೆಯ ಸೈನಿಕರು ಪಿಎಲ್‌ಎ ಸೈನಿಕರ ವಿರುದ್ದ ಮೇಲುಗೈ ಸಾಧಿಸಿದ್ದಾರೆ. ಎರಡೂ ಕಡೆಯ ಸೈನಿಕರಿಗೆ ಗಾಯಗಳಾಗಿವೆ ಆದರೆ ಒಂದೇ ಒಂದು ಮೃತ್ಯುವಿನ ಘಟನೆ ನಡೆದಿಲ್ಲ. ಭಾರತೀಯ ಸೈನಿಕರು ಚೀನೀ ಸೈನಿಕರನ್ನು ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಅವರು ಹೇಳಿದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅವರು (ರಕ್ಷಣಾ ಸಚಿವರು) ತಮ್ಮ ಹೇಳಿಕೆಯನ್ನು ಓದಿ ಹೊರಗೆ ಹೋದರು. ಅವರು ಯಾವುದೇ ಸ್ಪಷ್ಟನೆ ಅಥವಾ ಚರ್ಚೆಗೆ ಸಿದ್ಧರಿರಲಿಲ್ಲ. ಚೀನಾ  ರಾಜೀವ್ ಗಾಂಧಿ ಫೌಂಡೇಶನ್ ಗೆ 1 ಕೋಟಿ 35 ಲಕ್ಷ ರೂ ನೀಡಿದೆ ಎನ್ನುವುದಕ್ಕೆ ಯಾವುದೇ ಸಂಬಂಧವಿಲ್ಲ. ನಮ್ಮ ತಪ್ಪಿದ್ದರೆ ನಮ್ಮನ್ನು ಗಲ್ಲಿಗೇರಿಸಿ ಎಂದಿದ್ದಾರೆ.

ಗಡಿ ಪರಿಸ್ಥಿತಿ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿಕೆಯ ನಂತರ ಕಾಂಗ್ರೆಸ್ ರಾಜ್ಯಸಭೆಯಿಂದ ಹೊರನಡೆದಿದೆ.

https://twitter.com/i/status/1602800933984817152

 

ಡಿಸೆಂಬರ್ 9 ರಂದು ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನ ಯಾಂಗ್ಟ್ಸೆ ನಲ್ಲಿ ಭಾರತೀಯ ಸೇನೆ ಮತ್ತು 300 ಕ್ಕೂ ಹೆಚ್ಚು ಚೀನೀ ಸೈನಿಕರ ನಡುವೆ ಘರ್ಷಣೆ ನಡೆದಿದ್ದು, ಭಾರತೀಯ ಸೈನಿಕರು ಚೀನೀ ಸೈನಿಕರನ್ನು ಹೊಡೆದಟ್ಟಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವೀಡೀಯೋಗಳು ಹರಿದಾಡುತ್ತಿದ್ದರೂ ಇದು ಎಲ್ಲಿ ಮತ್ತು ಯಾವಾಗ ನಡೆದಿದೆ ಎನ್ನುವ ಸ್ಪಷ್ಟತೆ ಇಲ್ಲ.