ಏಷ್ಯಾಕಪ್ ಪಂದ್ಯ: ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಅಭಿಮಾನಿಗಳ ನಡುವೆ ಘರ್ಷಣೆ

ಶಾರ್ಜಾ: ಬುಧವಾರ ಶಾರ್ಜಾದಲ್ಲಿ ನಡೆದ ಏಷ್ಯಾ ಕಪ್ 2022 ರ ಕ್ರಿಕೆಟ್ ಪಂದ್ಯವನ್ನು ಗೆದ್ದ ನಂತರ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಬೆಂಬಲಿಗರ ಮಧ್ಯೆ ಸಂಘರ್ಷ ನಡೆದಿದೆ ಎಂದು ವರದಿಯಾಗಿದೆ.

ಪಂದ್ಯದ ಬಳಿಕ ಅಫ್ಘಾನ್ ಅಭಿಮಾನಿಗಳು ಕ್ರಿಕೆಟ್ ಸ್ಟೇಡಿಯಂಗೆ ಹಾನಿ ಮಾಡಲು ಪ್ರಾರಂಭಿಸಿದ್ದಾರೆ.

ಅಫ್ಘಾನ್ ಅಭಿಮಾನಿಗಳು ತಮ್ಮ ಭಾವನೆಗಳನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ ಮತ್ತು ಕ್ರೀಡಾಂಗಣದಲ್ಲಿ ಪಾಕಿಸ್ತಾನಿ ಅಭಿಮಾನಿಗಳಿಗೆ ಹೊಡೆಯುವ ಮೂಲಕ ತಮ್ಮ ಕೋಪವನ್ನು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಘರ್ಷಣೆಯ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.