ಜ.18 ರಂದು ಸಂಸದರಿಂದ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಾಂಗಣದ ಸ್ವಚ್ಛತೆ

ಉಡುಪಿ: ಅಯೋಧ್ಯೆ ರಾಮಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆಯ ಮಂಗಳ ಕಾರ್ಯದ ನಿಮಿತ್ತ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಜನವರಿ 12 ರಿಂದ 22ರವರೆಗೆ ನಾವೆಲ್ಲರೂ ಸೇರಿ ದೇಶದ ತೀರ್ಥಕ್ಷೇತ್ರಗಳನ್ನು, ಮಂದಿರಗಳನ್ನು ಸ್ವಚ್ಛಗೊಳಿಸಬೇಕು ಎಂಬ ಕರೆಯನ್ನು ನೀಡಿದ್ದು, ಆ ಪ್ರಯುಕ್ತ ಜ.18 ರಂದು ಬೆಳಿಗ್ಗೆ 9.30ಕ್ಕೆ ಉಡುಪಿ ಜಿಲ್ಲೆಯ ಪ್ರಸಿದ್ಧ ಕ್ಷೇತ್ರವಾದ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಾಂಗಣವನ್ನು ಕೇಂದ್ರ ಸಚಿವೆ ಹಾಗೂ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆಯವರು ಉಡುಪಿಯ ಶಾಸಕ ಯಶಪಾಲ್‌ ಸುವರ್ಣ ಹಾಗೂ ಕಾರ್ಯಕರ್ತರೊಂದಿಗೆ ಸ್ವಚ್ಛಗೊಳಿಸಲಿದ್ದಾರೆ ಎಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.