ಉಡುಪಿ: ಸ್ವಚ್ಛತಾ ಅಭಿಯಾನದ ಅಂಗವಾಗಿ ಉಡುಪಿ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ವತಿಯಿಂದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕ್ರೀಡಾಪಟುಗಳು ಒಳಾಂಗಣ ಕ್ರೀಡಾಂಗಣ, ಹೊರಾಂಗಣ ಕ್ರೀಡಾಂಗಣ ಹಾಗೂ ಅಜ್ಜರಕಾಡು ಭುಜಂಗ್ ಪಾರ್ಕ್ ಸುತ್ತಮುತ್ತ ಶ್ರಮದಾನದ ಮೂಲಕ ಸ್ವಚ್ಛತೆ ಮಾಡಿದರು.
ಈ ಸಂದರ್ಭದಲ್ಲಿ ಉಡುಪಿ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ, ಅಥ್ಲೆಟಿಕ್ ತರಬೇತುದಾರರಾದ ಅನಂತ ರಾಮ್, ಶಾಲಿನಿ ಶೆಟ್ಟಿ, ಅಬ್ಬಾಸ್, ಜಿಮ್ ತರಬೇತುದಾರ ಉಮೇಶ್ ಮಟ್ಟು, ಬ್ಯಾಡ್ಮಿಂಟನ್ ತರಬೇತುದಾರ ಅಕ್ಷಯ್ ಹಾಗೂ ಕ್ರೀಡಾಪಟುಗಳು ಹಾಜರಿದ್ದರು.