ಶಂಕರನಾರಾಯಣ: ರಸ್ತೆ ಕಾಮಗಾರಿಗಾಗಿ ಮರಗಳ ತೆರವು; ಸಾರ್ವಜನಿಕ ಅಹವಾಲು ಸಭೆ

ಶಂಕರನಾರಾಯಣ: ಸೋಮೇಶ್ವರ-ಕೋಟೇಶ್ವರ ಜಿಲ್ಲಾ ಮುಖ್ಯ ರಸ್ತೆಯಲ್ಲಿರುವ ರಸ್ತೆ ಅಗಲೀಕರಣ ಕಾಮಗಾರಿಗೆ ಅಡಚಣೆಯಾಗುವ ಅಕೇಶಿಯಾ ಹಾಗೂ ಇತರೆ ಜಾತಿಯ 147 ಮರಗಳನ್ನು ಮತ್ತು ಕುಂದಾಪುರ ತಾಲೂಕು ಕೋಟ-ಗೋಳಿಯಂಗಡಿ ಹಾಗೂ ಬ್ರಹ್ಮಾವರ-ಜನ್ನಾಡಿ ರಸ್ತೆ ಅಗಲೀಕರಣ ಕಾಮಗಾರಿಗೆ ಅಡಚಣೆಯಾಗುವ ಒಟ್ಟು 123 ಮರಗಳನ್ನು ತೆರವುಗೊಳಿಸುವ ಹಿನ್ನೆಲೆ ನವೆಂಬರ್ 29 ರಂದು ಮಧ್ಯಾಹ್ನ 3 ಗಂಟೆಗೆ ಶಂಕರನಾರಾಯಣ ವಲಯ ಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ.

ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗೆ ವೃಕ್ಷ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕುಂದಾಪುರ ವಿಭಾಗ ಇವರಿಗೆ ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ [email protected] ನಲ್ಲಿಯೂ ಸಲ್ಲಿಸಬಹುದಾಗಿದೆ ಎಂದು ಕುಂದಾಪುರ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.