ಮರಗಳ ತೆರವು: ಅಹವಾಲು ಸಭೆ

ಉಡುಪಿ: 169 ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ, ಕಾರ್ಕಳ ವಲಯ ವ್ಯಾಪ್ತಿಗೆ ಒಳಪಡುವ ಕಡಾರಿಯಿಂದ ಕಾರ್ಕಳ ಪುಲ್ಕೇರಿ ಜಂಕ್ಷನ್‌ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅಡಚಣೆಯಾಗುವ ಒಟ್ಟು 1634 ವಿವಿಧ ಜಾತಿಯ ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ಮೇ 30 ರಂದು ಮಧ್ಯಾಹ್ನ 3 ಗಂಟೆಗೆ ಕಾರ್ಕಳ ವಲಯ ಅರಣ್ಯಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ.

ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗೆ ವೃಕ್ಷ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕುಂದಾಪುರ ವಿಭಾಗ ಇವರಿಗೆ ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ kpurforest@yahoo.com  ನಲ್ಲಿಯೂ ಸಲ್ಲಿಸಬಹುದಾಗಿದೆ ಎಂದು ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.