ಜುಲೈ 12-13 ರಂದು ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸ

ಉಡುಪಿ: ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಮೊಮ್ಮಾಯಿ ಜುಲೈ 12 ಮತ್ತು 13 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಜು. 12 ರಂದು ರಾತ್ರಿ 8.30 ಕ್ಕೆ ಉಡುಪಿಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ಜು. 13 ರಂದು ಬೆಳಗ್ಗೆ 9 ಗಂಟೆಗೆ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಳೆ ಹಾನಿಗೆ ಸಂಬಂಧಿಸಿದಂತೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ನಂತರ ಉತ್ತರ ಕನ್ನಡ ಜಿಲ್ಲೆಯ ಭಟ್ಕಳಕ್ಕೆ ತೆರಳುವರು. 2.45 ಗಂಟೆಗೆ ಭಟ್ಕಳದಿಂದ ಹೊರಟು, ಉಡುಪಿ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆ ನಡೆಸಿ ನಂತರ ಮಂಗಳೂರಿಗೆ ತೆರಳಲಿರುವರು.