ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ತಗಲಿರುವುದು ಭಾನುವಾರ ದೃಢಪಟ್ಟಿದೆ. ಈ ಬಗ್ಗೆ ಸ್ವತ: ಯಡಿಯೂರಪ್ಪ ನವರ ಟ್ವೀಟರ್ ಖಾತೆಯಲ್ಲಿ ಮಾಹಿತಿ ನೀಡಲಾಗಿದೆ.
ಸಿಎಂ ಅವರಿಗೆ ಯಾವುದೇ ಕೊರೊನಾ ಲಕ್ಷಣ ಕಾಣಿಸಿಕೊಂಡಿಲ್ಲ. ಆದರೆ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ವೈದ್ಯರ ಸಲಹೆಯಂತೆ ಸಿಎಂ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಿಎಂ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ನನ್ನ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದೆ. ಯಾವುದೇ ರೋಗಲಕ್ಷಣ ಇಲ್ಲದಿದ್ದರೂ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಅವರು ಟ್ವೀಟರ್ ನಲ್ಲಿ ವಿನಂತಿಸಿದ್ದಾರೆ.