ವರ್ಷಾಂತ್ಯಕ್ಕೆ ಸಿಎಂ ಬದಲಾವಣೆ: ಬ್ರಹ್ಮಾಂಡ ಗುರೂಜಿ ಭವಿಷ್ಯ

ಹಾಸನ: ಈ ವರ್ಷಾಂತ್ಯದಲ್ಲಿ ರಾಜ್ಯದ ಸಿಎಂ ಬದಲಾಗುತ್ತಾರೆ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮಾ ಭವಿಷ್ಯ ನುಡಿದಿದ್ದಾರೆ.

ಗುರುವಾರ ಹಾಸನಾಂಬ ದೇವಿ ದರ್ಶನ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಮೂರು ಮುಖ್ಯಮಂತ್ರಿಗಳ ಆಡಳಿತಾವಧಿ ನಂತರ ಕರ್ನಾಟಕವೂ ಆಂಧ್ರ-ತೆಲಂಗಾಣದಂತೆ ಒಡೆದು ಹೋಳಾಗುತ್ತದೆ. ಬೆಳಗಾವಿ ಉತ್ತರ ಕರ್ನಾಟಕದ ಕೇಂದ್ರ ಬಿಂದುವಾದರೆ ಬೆಂಗಳೂರು ದಕ್ಷಿಣದ ರಾಜಧಾನಿ ಆಗಿರುತ್ತದೆ ಎಂದೂ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮುಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತಾರೆ. ಆದರೆ ಬಿಜೆಪಿಯವರೇ ಅವರನ್ನು ಪ್ರಧಾನಿ ಸ್ಥಾನದಲ್ಲಿ ಕೂರಲು ಬಿಡುವುದಿಲ್ಲ. ಅದಕ್ಕಾಗಿ ಒಂದು ತಂಡ
ಪಕ್ಷದಲ್ಲಿ ಕೆಲಸ ಮಾಡುತ್ತಿದೆ ಎಂದು ನುಡಿದಿದ್ದಾರೆ. ಯಡಿಯೂರು ಕ್ಷೇತ್ರದ ರೇಣುಕಾ ಶಿವಾಚಾರ್ಯ ಸ್ವಾಮೀಜಿ ಇದ್ದರು.