ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ನೂತನ ಆಡಳಿತ ಸೌಧ ಕಟ್ಟಡವನ್ನು ಬುಧವಾರದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದರು.
ತದನಂತರ ಹೆಬ್ರಿಯ ಸುಸಜ್ಜಿತ ಬಸ್ ನಿಲ್ದಾಣ ಕಾಮಗಾರಿ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತರಗತಿ ಕೊಠಡಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್ ಅಶೋಕ್ , ನೀರಾವರಿ ಸಚಿವ ಗೋವಿಂದ ಕಾರಜೋಳ , ಇಂಧನ ಸಚಿವ ಸುನಿಲ್ ಕುಮಾರ್ , ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರಿಕಾ ಸಚಿವ ಎಸ್. ಅಂಗಾರ, ಶಾಸಕರಾದ ರಘುಪತಿ ಭಟ್, ಲಾಲಾಜಿ ಮೆಂಡನ್, ಬಿ ಎಂ ಸುಕುಮಾರ್ ಶೆಟ್ಟಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ, ರಾಜ್ಯ ಗೇರು ಬೀಜ ನಿಗಮದ ಅಧ್ಯಕ್ಷ ಮಣಿರಾಜ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮತ್ತು ಇತರರು ಉಪಸ್ಥಿತರಿದ್ದರು.