ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಡಾಲರ್ಸ್ ಕಾಲೊನಿಯ ನಿವಾಸದಲ್ಲಿ ಶುಕ್ರವಾರ ರಾತ್ರಿ ಅಸ್ವಸ್ಥಗೊಂಡಿದ್ದ ಸಂತೋಷ್ ಅವರನ್ನು ಕುಟುಂಬದವರು ಕೂಡಲೇ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿದರು. ಸಂತೋಷ್ ನಿದ್ರೆ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶುಕ್ರವಾರ ತಡರಾತ್ರಿ ಆಸ್ಪತ್ರೆಗೆ ಭೇಟಿ ನೀಡಿ ಸಂತೋಷ್ ಅವರ ಆರೋಗ್ಯ ವಿಚಾರಿಸಿದರು.
ರಾಜಕೀಯ ಒತ್ತಡ
ಸಂತೋಷ್ ಆತ್ಮಹತ್ಯೆಗೆ ರಾಜಕೀಯ ಒತ್ತಡ ಇತ್ತು. ಕಳೆದ ಒಂದು ವಾರದಿಂದ ಸರ್ಕಾರದಲ್ಲಿ ಆಗುತ್ತಿರುವ ಚಟುವಟಿಕೆಗಳಿಂದ ಅವರು ಮನನೊಂದಿದ್ದರು ಎಂದು ಅವರ ಪತ್ನಿ ಜಾಹ್ನಿವಿ ತಿಳಿಸಿದ್ದಾರೆ.












