ಬೆಂಗಳೂರು: ತಮ್ಮ ಸರ್ಕಾರಕ್ಕೆ ಆರು ತಿಂಗಳು ಪೂರೈಸಿದ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಗ್ಯಾರಂಟಿ ಸಾಧನೆ ಬಗ್ಗೆ ವಿವರಿಸುತ್ತ, ಗೃಹಲಕ್ಷ್ಮಿ ಯೋಜನೆಯಡಿ ರೂ. 17,500 ಕೋಟಿ ಅನುದಾನ ಮೀಸಲಿಟ್ಟಿದ್ದು, ಈವರೆಗೆ ರೂ. 11,200 ಕೋಟಿ ಅನುದಾನ ಸರ್ಕಾರದಿಂದ ಬಿಡುಗಡೆ ಮಾಡಲಾಗಿದೆ. 99.52 ಲಕ್ಷ ನೋಂದಾಯಿತ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಹಣ ವರ್ಗಾವಣೆಯಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.99.52 ಲಕ್ಷ ನೋಂದಾಯಿತ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯಡಿ ಈವರೆಗೆ 11,200 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಗ್ಯಾರಂಟಿ ಯೋಜನೆಗಳು ಸೇರಿದಂತೆ ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳ ಜಾರಿ ಮತ್ತು ಸಮಾಜದ ಶಾಂತಿ-ಸಾಮರಸ್ಯದ ರಕ್ಷಣೆ ನಮ್ಮ ಸರ್ಕಾರದ ಪ್ರಮುಖ ಉದ್ದೇಶ. ಸಾಧಿಸಿದ್ದು ಹಲವು, ಸಾಗಬೇಕಾದ ಹಾದಿ ಬಹುದೂರ ಇದೆ. ಕರ್ನಾಟಕ ಅಭಿವೃದ್ಧಿ ಮಾದರಿಯ ಈ ಪಯಣದಲ್ಲಿ ಜೊತೆಯಾಗಿ ಸಾಗೋಣ, ನಾಡನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸೋಣ ಎಂದು ತಿಳಿಸಿದ್ದಾರೆ.
ಅಕ್ಟೋಬರ್ ವರೆಗೆ ಶಕ್ತಿ ಯೋಜನೆಗೆ 2,071 ಕೋಟಿ ವೆಚ್ಚ: ಶಕ್ತಿ ಯೋಜನೆಗೆ 2023-24ನೇ ಸಾಲಿನಲ್ಲಿ ಸರ್ಕಾರ ಒಟ್ಟು 2,800 ಕೋಟಿ ರೂ. ಅನುದಾನ ಹಂಚಿದೆ. ಜೂನ್ 11ರಿಂದ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ ಆರಂಭವಾಗಿತ್ತು. ಅಕ್ಟೋಬರ್ವರೆಗೆ ಇದರಡಿ ಸುಮಾರು 87.31 ಕೋಟಿ ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್ನಲ್ಲಿ ಪ್ರಯಾಣಿಸಿದ್ದಾರೆ. ಅಕ್ಟೋಬರ್ವರೆಗೆ ಸುಮಾರು 2,071 ಕೋಟಿ ರೂ. ಉಚಿತ ಟಿಕೆಟ್ ವೆಚ್ಚವಾಗಿದೆ ಎಂದು ರಸ್ತೆ ಸಾರಿಗೆ ನಿಗಮಗಳು ಮಾಹಿತಿ ನೀಡಿದ್ದವು. ಕೆಡಿಪಿ ಪ್ರಗತಿ ಅಂಕಿಅಂಶದಂತೆ, ಅಕ್ಟೋಬರ್ವರೆಗೆ ಈ ಯೋಜನೆಗಾಗಿ 1,080 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಅಕ್ಟೋಬರ್ವರೆಗೆ ಒಟ್ಟು 599 ಕೋಟಿ ರೂ. ಮಾತ್ರ ವೆಚ್ಚ ತೋರಿಸಿದೆ. ಈ ಪೈಕಿ ಎಸ್ಸಿಎಸ್ಪಿಟಿಎಸ್ಪಿ ಅಡಿ 445 ಕೋಟಿ ರೂ. ಬಿಡುಗಡೆಯಾಗಿದೆ.
ಕುಟುಂಬ ನಿರ್ವಹಣೆಯ ಹೊಣೆಹೊತ್ತ ನಾಡಿನ ಮಹಿಳೆಯರಿಗೆ ಬೆಲೆ ಏರಿಕೆಯಿಂದ ತುಸು ನೆಮ್ಮದಿ ನೀಡಿ. ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ನಾವು ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದ್ದು, ಮಾಸಿಕ ರೂ.2,000 ಸಹಾಯಧನ ನೀಡುತ್ತಿದ್ದೇವೆ. ಯೋಜನೆಗೆ ನೋಂದಾಯಿಸಿಕೊಂಡಿರುವ 99 ಲಕ್ಷದ 52 ಸಾವಿರ ಮಹಿಳೆಯರ ಖಾತೆಗೆ ಹಣ ಜಮೆ ಮಾಡಲಾಗಿದೆ. ಕಳೆದ 6 ತಿಂಗಳ ಅವಧಿಯಲ್ಲಿ ನಾಡಿನ ಜನತೆಗೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ ಎಂದಿದ್ದಾರೆ.