ಸಿಎಂ ಸಿದ್ದರಾಮಯ್ಯ ; 2024 ರಲ್ಲಿ ರಾಜ್ಯದಲ್ಲಿ ‘ಯುವನಿಧಿ’ ಜಾರಿ, ಕೌಶಲ್ಯಾಭಿವೃದ್ಧಿ ತರಬೇತಿ

ತೆಲಂಗಾಣ : ಭಾನುವಾರ ತೆಲಂಗಾಣಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಾತನಾಡಿದರು.2024 ರಲ್ಲಿ ಕರ್ನಾಟಕದಲ್ಲಿ ಯುವನಿಧಿ ಜಾರಿಗೊಳಿಸಲಾಗುತ್ತದೆ ಹಾಗೂ ಯುವಜನರಿಗೆ ಕೌಶಾಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

2022-23ನೇ ಸಾಲಿನಲ್ಲಿ ಪದವಿ ಪಡೆದ ಯುವಜನರಿಗೆ 2 ವರ್ಷಗಳವರೆಗೆ ಮಾಸಿಕ 3000 ರೂ. ಹಾಗೂ 2 ವರ್ಷದವರಗೆ ಡಿಪ್ಲೊಮಾ ಮಾಡಿದ ಯುವಜನರಿಗೆ ಮಾಸಿಕ 1500 ರೂ.ಗಳನ್ನು ನೀಡಲಾಗುತ್ತೆ, . ಇದಲ್ಲದೇ ಯುವಜನರಿಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನೂ ನೀಡಲಾಗುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದರು ನಾವು ಅಧಿಕಾರ ಸ್ವೀಕರಿಸಿದ ಮೇ 20ರ ದಿನದಂದೇ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿಗಳ ಅನುಷ್ಠಾನಗೊಳಿಸಲು ಸಂಪುಟ ಸಭೆ ನಡೆಸಿ ತೀರ್ಮಾನಿಸಿದ್ದೇವೆ. ಸಂಬಂಧಪಟ್ಟ ಸರ್ಕಾರಿ ಆದೇಶಗಳನ್ನು ಅಂದೇ ನೀಡಲಾಯಿತು . ಕರ್ನಾಟಕ ರಾಜ್ಯದ ಜನತೆಗೆ ಮೋಸ ಮಾಡಿರುವ ಪ್ರಶ್ನೆಯೇ ಉದ್ಭವಿಸುವುದಿಲ್ಲ..ಯುವ ನಿಧಿ ಯೋಜನೆಯನ್ನು ಜಾರಿಗೆ ಮಾಡಿದರೆ ನಾವು ಘೋಷಣೆ ಮಾಡಿದಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಒಂದೇ ವರ್ಷದೊಳಗೆ ಜಾರಿಗೊಳಿಸಿದಂತಾಗುತ್ತದೆ ಎಂದು ಹೇಳಿದರು . ಕಾಂಗ್ರೆಸ್ ಪಕ್ಷ ನೀಡಿರುವ ಎಲ್ಲ ಪಂಚ ಗ್ಯಾರಂಟಿಗಳನ್ನು 5 ವರ್ಷಗಳವರೆಗೆ ಅನುಷ್ಠಾನಗೊಳಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು