ಬೆಂಗಳೂರು: ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ಸಿ.ಎಂ.ಉದಾಸಿ (85) ಮಂಗಳವಾರ ದೀರ್ಘಕಾಲದ ಅನಾರೋಗ್ಯದಿಂದ ನಿಧನ ಹೊಂದಿದರು.
1983ರಲ್ಲಿ ಮೊದಲ ಬಾರಿಗೆ ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿದ್ದರು. ಬಳಿಕ ಅವರು 1985 ರಲ್ಲಿ ಜನತಾಪಕ್ಷದಿಂದ ಗೆಲುವು ಸಾಧಿಸಿದ್ದರು. 1994ರಲ್ಲಿ ಜನತಾದಳದಿಂದ ಆಯ್ಕೆಯಾಗಿದ್ದರು.
ದಳ ಇಬ್ಭಾಗ ಆದ ನಂತರ ಅವರು ಬಿಜೆಪಿ ಸೇರ್ಪಡೆಗೊಂಡರು. 2004, 2008 ಮತ್ತು 2018 ರಲ್ಲಿ ಬಿಜೆಪಿಯಿಂದ ಗೆದ್ದಿದ್ದರು. 2013 ರಲ್ಲಿ ಕೆಜೆಪಿಯಿಂದ ಸ್ಪರ್ಧಿಸಿ ಸೋತಿದ್ದರು. ಯಡಿಯೂರಪ್ಪ ಅವರ ಮಂತ್ರಿ ಮಂಡಲದಲ್ಲಿ ಸಾರಿಗೆ, ಲೋಕೋಪಯೋಗಿ ಖಾತೆಯನ್ನು ನಿಭಾಯಿಸಿದ್ದರು.