ಬಿ.ಕೆ.ಹರಿಪ್ರಸಾದ್ ಜೊತೆಗೆ ಸಿಎಂ ಉಪಾಹಾರ ಭೇಟಿ

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ನಿವಾಸಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮಂಗಳೂರಿನಲ್ಲಿ ಸೌಹಾರ್ದತೆ ನೆಲೆಸಬೇಕು. ದ್ವೇಷ ಯಾವುದೇ ಕಾರಣಕ್ಕೂ ಇರಬಾರದು ಎಂಬ ಬಗ್ಗೆ ಚರ್ಚಿಸಲಾಯಿತು.

ಕೋಮು ಗಲಭೆಗಳನ್ನು ಉಂಟುಮಾಡುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕೂಡ ಕಾನೂನಿನ ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾರೂ ಕಾನೂನಿಗಿಂತ ದೊಡ್ಡವರಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.ವಸತಿ ಸಚಿವ ಜಮೀರ್ ಅಹಮದ್ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಹಾಜರಿದ್ದರು.