ಉಡುಪಿ: ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕ.ರಾ.ಮು.ವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕ ಸಹಾಯಕರ (ಜೆ.ಆರ್.ಎಫ್), ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟ್ರ ಮಟ್ಟದ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್) ಹಾಗೂ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಗೆ 45 ದಿನಗಳ ತರಬೇತಿ ಶಿಬಿರ ಏರ್ಪಡಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 8 ರ ಒಳಗೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕ.ರಾ.ಮು.ವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0821-2515944 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕ.ರಾ.ಮು.ವಿ ಕುಲಸಚಿವ ಪ್ರೊ.ಕೆ.ಎಲ್.ಎನ್ ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.