ಕಾರ್ಕಳ: ನಿಟ್ಟೆ ಗ್ರಾಮದ ಪರಪ್ಪಾಡಿ ಅರ್ಬಿ ಫಾಲ್ಸ್ ವೀಕ್ಷಣೆಗೆ ಸ್ನೇಹಿತರೊಂದಿಗೆ ಬಂದಿದ್ದ ಕಾರ್ಕಳ ತಾಲೂಕಿನ ಕಾಲೇಜೊಂದರ ವಿದ್ಯಾರ್ಥಿನಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ.
ಮಂಗಳೂರಿನ ವರ್ಷಿತಾ (19) ಮೃತ ವಿದ್ಯಾರ್ಥಿನಿ. ಈಕೆ ಇಬ್ಬರು ವಿದ್ಯಾರ್ಥಿಗಳೊಂದಿಗೆ ಅರ್ಬಿ ಫಾಲ್ಸ್ಗೆ ತೆರಳಿದ್ದಳು. ಈ ವೇಳೆ ವರ್ಷಿತಾ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಕಾರ್ಕಳ ಅಗ್ನಿ ಶಾಮಕ ದಳ ತೆರಳಿ ಮೃತದೇಹವನ್ನು ಮೇಲಕೆತ್ತಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.