ಕಾರುಗಳ ನಡುವೆ ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ, ಎಂಟು ಮಂದಿಗೆ ಗಂಭೀರ ಗಾಯ

ಚಿತ್ರದುರ್ಗ: ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, 8 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕೊಮ್ಮನಪಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ 150ಎ ನಲ್ಲಿ ಸಂಭವಿಸಿದೆ.

ಮೃತರನ್ನು ಬೆಂಗಳೂರು ಮೂಲದ ವನಜಾಕ್ಷಿ(36) ಹಾಗೂ ಚಿತ್ರದುರ್ಗ ಮೂಲದ ಮಹೇಂದ್ರ(50) ಎಂದು ಗುರುತಿಸಲಾಗಿದೆ. ಮಾರುತಿ ಕಾರು ಹಾಗೂ ಹುಂಡೈ ಕಾರುಗಳ ಮಧ್ಯೆ ಈ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಎಂಟು ಮಂದಿಗೆ ಗಾಯಗಳಾಗಿದ್ದು, ಎಲ್ಲರನ್ನೂ ಮೊಳಕಾಲ್ಮೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೊಳಕಾಲ್ಮೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.