ಸಾಲಿಗ್ರಾಮ: ಗೆಳೆಯರ ಬಳಗದ ವತಿಯಿಂದ ಡಾ.ಕೋಟ ಶಿವರಾಮ ಕಾರಂತರ ಜನ್ಮದಿನಾಚರಣೆ ಅಂಗವಾಗಿ ಅ.15 ರಂದು ಸಂಜೆ 6 ಗಂಟೆಗೆ ಕಾರ್ಕಡದ ಗಿರಿಜಾ ಕಲ್ಯಾಣ ಮಂತಪದಲ್ಲಿ ಕಾರಂತರ ಸಂಸ್ಮರಣೆ ಹಾಗೂ ಕಾರಂತ ಪುರಸ್ಕಾರ ಸಮಾರಂಭ ಜರುಗಲಿದ್ದು, ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಇವರು ವಹಿಸಿಕೊಳ್ಳಲಿದ್ದಾರೆ. ಹಿರಿಯ ಪತ್ರಕರ್ತ ಮೊಗೇರಿ ಜಯರಾಮ ಅಡಿಗ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್.ಪ್ರದೀಪ್ ಕುಮಾರ್ ಕಲ್ಕೂರ ಮತ್ತು ಡಿ. ದೇವರಾಜ್ ಅರಸು ಪ್ರಶಸ್ತಿ ಪುರಸ್ಕೃತ ಡಾ. ಎಂ. ಅಣ್ಣಯ್ಯ ಕುಲಾಲ್ ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಬನ್ನಂಜೆ ಸಂಜೀವ ಸುವರ್ಣ ಇವರಿಗೆ ಗೆಳೆಯರ ಬಳಗ ಕಾರಂತ ಪುರಸ್ಕಾರ-2022 ಅನ್ನು ಪ್ರದಾನ ಮಾಡಲಾಗುವುದು.
ಸಂಸ್ಮರಣಾ ಕಾರ್ಯಕ್ರಮದ ನಿಮಿತ್ತ ಸಂಜೆ 5 ರಿಂದ ಕೆ.ಚಂದ್ರಕಾಂತ್ ನಾಯರಿ ಮತ್ತು ಸ್ಥಳೀಯ ಪ್ರತಿಭೆಗಳಿಂದ ಗಾನ ನಮನ ಕಾರ್ಯಕ್ರಮ ಮತ್ತು ಶಶಿಕಾಂತ್ ಶೆಟ್ಟಿ ಕಾರ್ಕಳ ಇವರ ತಂಡದಿಂದ ವಿಶ್ವಾಮಿತ್ರ ಮೇನಕೆ ಮಾಗಧ ವಧೆ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಗೆಳೆಯರ ಬಳಗದ ಅಧ್ಯಕ್ಷರು, ಪದಾಧಿಕಾರಿಗಳು ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ಸರ್ವಸದಸ್ಯರು ತಿಳಿಸಿರುತ್ತಾರೆ.












