ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 171.50 ರೂ ಕಡಿತ; ಗೃಹಬಳಕೆ ಯಥಾಸ್ಥಿತಿ

ನವದೆಹಲಿ: ಪೆಟ್ರೋಲಿಯಂ ಮತ್ತು ತೈಲ ಮಾರುಕಟ್ಟೆ ಕಂಪನಿಗಳು ಸೋಮವಾರದಿಂದಲೇ ಜಾರಿಗೆ ಬರುವಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕಡಿತಗೊಳಿಸಿವೆ. 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 171.50 ರೂ ಕಡಿತಗೊಳಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಆದಾಗ್ಯೂ, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಯಥಾಸ್ಥಿತಿಯಲ್ಲಿದೆ.

ದೆಹಲಿಯಲ್ಲಿ 19 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಮಾರಾಟದ ಬೆಲೆ ಈಗ 1,856.50 ರೂ ಆಗಿದ್ದರೆ, ಮುಂಬೈನಲ್ಲಿ 1,808 ರೂ, ಕೋಲ್ಕತ್ತಾದಲ್ಲಿ1,960.50 ರೂ ಹಾಗೂ ಚೆನ್ನೈ ನಲ್ಲಿ 2,021ರೂ ಆಗಲಿದೆ. ಬೆಂಗಳೂರಿನಲ್ಲಿ ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 1,105.50 ಆಗಿದ್ದರೆ, ವಾಣಿಜ್ಯ ಸಿಲಿಂಡರ್ ದರ 2190.50 ಆಗಿದೆ.

2022 ರಲ್ಲಿ, ದೇಶೀಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ನಾಲ್ಕು ಬಾರಿ ಹೆಚ್ಚಿದೆ ಮತ್ತು ಮೂರು ಬಾರಿ ಕಡಿತವಾಗಿದೆ. ಅಂತರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ತೈಲ ಬೆಲೆಯನ್ನು ಅನುಸರಿಸಿ ದೇಶೀಯ ಮಾರುಕಟ್ಟೆಯಲ್ಲಿ ಎಲ್‌ಪಿಜಿ ಸಿಲಿಂಡರ್ ಬೆಲೆ ಹೆಚ್ಚು ಕಡಿಮೆ ಮಾಡಲಾಗುತ್ತದೆ.