ಹಾಸನ: ಪತ್ನಿಯನ್ನು ಚಾಕುವಿನಿಂದ ಇರಿದು ಕೊಂದು ಬಳಿಕ ಪತಿರಾಯ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಶಾಂತಿಗ್ರಾಮದ ಮನೆಯಲ್ಲಿ ನಡೆದಿದೆ.
ಪತ್ನಿ ಅನ್ನಪೂರ್ಣ(23) ಎಂಬ ಮಹಿಳೆಯನ್ನು ಆಕೆಯ ಪತಿ ತುಳಸಿದಾಸ್(40) ಬರ್ಬರವಾಗಿ ಹತ್ಯೆಗೈದಿದ್ದಾನೆ. ಬಳಿಕ ತಾನು ನೇಣಿಗೆ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇವರು ಮೂರು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದರು ಎಂದು ತಿಳಿದುಬಂದಿದೆ. ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












