ಕಾರ್ಕಳ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಪೋಸ್ಟ್: ಹಿಂದೂ ಜಾಗರಣ ವೇದಿಕೆಯ ಮುಖಂಡನ ಬಂಧನ

ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ಜಾತಿ ಮತ್ತು ಧರ್ಮಗಳ ನಡುವೆ ವೈರತ್ವ ಮತ್ತು ಕೋಮು ಗಲಭೆಗೆ ಪ್ರಚೋದನೆ ನೀಡುವ ಪೋಸ್ಟ್ ಹಾಕಿದ ಹಿಂದೂ ಜಾಗರಣ ವೇದಿಕೆಯ ಮುಖಂಡನನ್ನು ಅಜೆಕಾರು ಪೊಲೀಸರು ಬಂಧಿಸಿದ್ದಾರೆ.

ಹಿಂದೂ ಜಾಗರಣ ವೇದಿಕೆಯ ಮುಖಂಡ ಅಜೆಕಾರು ಮರ್ಣೆ ಗ್ರಾಮದ ನಿವಾಸಿ ರತ್ನಾಕರ ಅಮೀನ್ ಬಂಧಿತ ಆರೋಪಿ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.