ಉಡುಪಿ: ಉಡುಪಿ ನಗರಸಭೆಯ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ದೀನದಯಾಳ್ ಅಂತ್ಯೋದಯ ಯೋಜನೆ- ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಗೌರವಧನದೊಂದಿಗೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಉಡುಪಿ ನಗರಸಭೆಯಿಂದ ರಚಿಸಲ್ಪಟ್ಟ 18 ರಿಂದ 45 ವರ್ಷದೊಳಗಿನ, ಸ್ವ-ಸಹಾಯ ಗುಂಪು ಅಥವಾ ಪ್ರದೇಶ ಮಟ್ಟದ ಒಕ್ಕೂಟದ ಮಹಿಳಾ ಸದಸ್ಯರು ಅರ್ಜಿ ಸಲ್ಲಿಸಬಹುದಾಗಿದ್ದು, ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ಜನವರಿ 25 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಗರಸಭೆ ಕಚೇರಿಯನ್ನು ಸಂಪರ್ಕಿಸುವಂತೆ ನಗರಸಭೆ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.