ಅನುಕಂಪದ ಆಧಾರದ ಮೇಲೆ ನೇಮಕಾತಿ ಒಂದು ಸಲ ಮಾತ್ರ, ಉನ್ನತ ಹುದ್ದೆ ಕೇಳುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಅನುಕಂಪದ ಆಧಾರದ ಮೇಲಿನ ನೇಮಕಾತಿ ಒಂದು ಬಾರಿ ನೀಡುವ ಪರಿಹಾರ ಕ್ರಮವಾಗಿದ್ದು, ನಂತರ ಉನ್ನತ ಶೈಕ್ಷಣಿಕ ಅರ್ಹತೆಯನ್ನು ಮುಂದಿಟ್ಟುಕೊಂಡು ಹೆಚ್ಚಿನ ಸೌಲಭ್ಯ ಅಥವಾ ಉನ್ನತ ಹುದ್ದೆ ಕೋರಿ ಹಕ್ಕು ಮಂಡಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆಗೆ ಅನುಕಂಪದ ಆಧಾರದ ಮೇಲೆ ನೇಮಕಗೊಂಡಿದ್ದ ಇಬ್ಬರು ನೌಕರರನ್ನು ಅವರ ಶೈಕ್ಷಣಿಕ ಅರ್ಹತೆಯ ಆಧಾರದಲ್ಲಿ ಪ್ರಥಮ ದರ್ಜೆ ಸಹಾಯಕ (FDA) ಹುದ್ದೆಗೆ ಪರಿಗಣಿಸುವಂತೆ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (KAT) ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಏನಿದು ಪ್ರಕರಣ?

ಬೆಳಗಾವಿಯ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸರ್ಕಾರಿ ನೌಕರರು ಮೃತಪಟ್ಟ ಹಿನ್ನೆಲೆಯಲ್ಲಿ, ಅವರ ಕುಟುಂಬದ ಸದಸ್ಯರಿಗೆ 2018ರಲ್ಲಿ ಅನುಕಂಪದ ಆಧಾರದ ಮೇಲೆ ದ್ವಿತೀಯ ದರ್ಜೆ ಸಹಾಯಕ ಹುದ್ದೆ ನೀಡಲಾಗಿತ್ತು.

ಆದರೆ, ತಮಗೆ ಉನ್ನತ ಶೈಕ್ಷಣಿಕ ಅರ್ಹತೆ ಇರುವುದರಿಂದ ಪ್ರಥಮ ದರ್ಜೆ ಸಹಾಯಕ ಹುದ್ದೆ ನೀಡಬೇಕು ಎಂದು ಕೋರಿ ಇಬ್ಬರು ನೌಕರರು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಯ ಮೊರೆ ಹೋಗಿದ್ದರು. ಅವರಲ್ಲಿ ಒಬ್ಬರು ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವಿ ಹೊಂದಿದ್ದರು.

ಅರ್ಜಿಯ ವಿಚಾರಣೆ ನಡೆಸಿದ್ದ KAT, ಅರ್ಜಿದಾರರನ್ನು FDA ಹುದ್ದೆಗೆ ಪರಿಗಣಿಸುವಂತೆ ಸರ್ಕಾರಕ್ಕೆ ಸೂಚಿಸಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

ಅನುಕಂಪದ ನೇಮಕಾತಿ ಒಂದು ಬಾರಿಯ ಪರಿಹಾರ

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಮತ್ತು ನ್ಯಾಯಮೂರ್ತಿ ಹೇಮಾ ಕುಲಕರ್ಣಿ ಅವರಿದ್ದ ವಿಭಾಗೀಯ ಪೀಠವು, ಸರ್ಕಾರಿ ನೌಕರನ ಹಠಾತ್ ನಿಧನದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕುವ ಕುಟುಂಬಕ್ಕೆ ತಕ್ಷಣದ ನೆರವು ನೀಡುವುದೇ ಅನುಕ