ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧಿತ ದೂರು ನೀಡಲು ಅವಕಾಶ

ಉಡುಪಿ: ಮೇ ತಿಂಗಳಿನಲ್ಲಿ ನಡೆಯುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ, ಜಿಲ್ಲಾಧಿಕಾರಿಗಳ ಕಚೇರಿಯ ಒಂದನೇ ಮಹಡಿಯ ಕೊಠಡಿ ಸಂಖ್ಯೆ ಎ204 ರಲ್ಲಿ ಚುನಾವಣಾ ಸಂಬಂಧಿ ದೂರುಗಳ ನಿರ್ವಹಣಾ ಕೇಂದ್ರವನ್ನು ಸ್ಥಾಪಿಸಲಾಗಿದೆ.

ಸಾರ್ವಜನಿಕರು ಚುನಾವಣೆಗೆ ಸಂಬಂಧಪಟ್ಟ ದೂರುಗಳಿದ್ದಲ್ಲಿ cVIGIL App ಮೂಲಕ , ಮತದಾರರ ಸಹಾಯವಾಣಿ ಕೇಂದ್ರ 1950 ಹಾಗೂ ಸ್ಥಿರ ದೂರವಾಣಿ ಸಂಖ್ಯೆ 0820-2574991 ಗೆ ಕರೆ ಮಾಡುವ ಮೂಲಕ ಹಾಗೂ National Grievances Redressal System ಆನ್‌ಲೈನ್ ಮೂಲಕ ದೂರು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ದೂರುಗಳ ಪರಿಹಾರ ಮತ್ತು ಮತದಾರರ ಸಹಾಯವಾಣಿಯ ನೋಡೆಲ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.