ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಆಡಳಿತ ಮಂಡಳಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಎಸಗಿದೆಯೆಂದು ಆರೋಪಿಸಿ ಮಾನವ ಹಕ್ಕು ಹೋರಾಟಗಾರ ಸಿ.ಎಸ್. ಶ್ರೀನಾಥ್ ಎಂಬುವವರು ಎಸಿಬಿಗೆ ದೂರು ನೀಡಿದ್ದಾರೆ.
ದೇಗುಲದ ಆಡಳಿತಾಧಿಕಾರಿ ಎಂ.ಜೆ. ರೂಪಾ ಹಾಗೂ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಅವರ ವಿರುದ್ಧ ಪಶ್ಚಿಮ ವಲಯ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದಲ್ಲಿ ದೂರು ದಾಖಲಾಗಿದೆ. ದೇವಸ್ಥಾನದಲ್ಲಿ ಕೋಟ್ಯಾಂತರ ಮೌಲ್ಯದ ಚಿನ್ನಾಭರಣ ಹಾಗೂ ಬೆಲೆಬಾಳುವ ಪುರಾತನ ವಿಗ್ರಹಗಳು ನಾಪತ್ತೆಯಾಗಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.












