ಕೇರಳದಲ್ಲಿ ಕಂಪ್ಲೀಟ್ ಲಾಕ್ ಡೌನ್ ಘೋಷಣೆ

ಕೇರಳ: ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ ಸರ್ಕಾರವು ರಾಜ್ಯದಲ್ಲಿ ಮೇ 8ರಿಂದ 16ರ ವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿದೆ.

ಸದ್ಯ ಕೇರಳದಲ್ಲಿ ಕೊರೊನಾ ನಿಯಂತ್ರಣದಲ್ಲಿದೆ. ಆದರೆ ದಿನೇ ದಿನೇ ಕೊರೊನಾ ಕೇಸ್ ಹೆಚ್ಚುತ್ತಿದ್ದು, ಸಾವಿನ ಸಂಖ್ಯೆಯಲ್ಲಿ‌ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಕೇರಳ ಸಿಎಂ ಪಿಣರಾಯಿ ವಿಜಯನ್ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಆದೇಶ ಹೊರಡಿಸಿದ್ದಾರೆ.