ಕರಾವಳಿ ಭದ್ರತಾ ತರಬೇತಿ ಸಂಸ್ಥೆಯ 3 ನೇ ತಂಡದ ತರಬೇತಿ ಮುಕ್ತಾಯ

ಉಡುಪಿ: ಕರಾವಳಿ ಕಾವಲು ಪೊಲೀಸ್ ಘಟಕದ ಕರಾವಳಿ ಭದ್ರತಾ ತರಬೇತಿ ಸಂಸ್ಥೆಯ 3 ನೇ ತಂಡದ ತರಬೇತಿಯ ಸಮಾರೋಪ ಸಮಾರಂಭವು ಇತ್ತೀಚೆಗೆ ಮಲ್ಪೆಯ ಸಿಎಸ್‌ಪಿ ಕೇಂದ್ರ ಕಚೇರಿಯಲ್ಲಿ ನಡೆಯಿತು.

ಕರಾವಳಿ ಕಾವಲು ಪೊಲೀಸ್ ಅಧೀಕ್ಷಕ ಅಬ್ದುಲ್ ಅಹದ್ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಲೋಕಾಯುಕ್ತ ಮಂಗಳೂರು ಪೊಲೀಸ್ ಅಧೀಕ್ಷಕ ಸೈಮನ್ ಸಿ.ಎ, ಅಜ್ಜರಕಾಡು ಡಾ.ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ಚಂದ್ರಶೇಖರ ಬಿ.ಎಮ್ ಉಪಸ್ಥಿತರಿದ್ದರು.

ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದ ಹೊನ್ನಾವರ ಠಾಣೆಯ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ವಿಮಲ ನಾಯ್ಕ, ದ್ವಿತೀಯ ಸ್ಥಾನ ಪಡೆದ ಕುಮಟ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ನಾಗೇಶ್ ಗೌಡ ಹಾಗೂ ತೃತೀಯ ಸ್ಥಾನ ಪಡೆದ ಮಲ್ಪೆ ಠಾಣೆಯ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಭಾಗ್ಯ ಹೊಸಮನಿ ಇವರನ್ನು ಗೌರವಿಸಲಾಯಿತು.

ಪೊಲೀಸ್ ನಿರೀಕ್ಷಕ ಪ್ರಮೋದ ಕುಮಾರ್ ಸ್ವಾಗತಿಸಿ, ನಿಸ್ತಂತು ವಿಭಾಗದ ಪೊಲೀಸ್ ಉಪನಿರೀಕ್ಷಕ ಮನಮೋಹನ್ ರಾವ್ ನಿರೂಪಿಸಿ, ಗುಪ್ತವಾರ್ತೆ ವಿಭಾಗದ ಪೊಲೀಸ್ ನಿರೀಕ್ಷಕಿ ರೇವತಿ ವಂದಿಸಿದರು.