ಕುಂದಾಪುರ: ಜೂನ್12 ರಂದು ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಣಕಯಂತ್ರ ಪ್ರಯೋಗಾಲಯದ ಉದ್ಘಾಟನಾ ಸಮಾರಂಭವು ಜರುಗಿತು.
ಕರ್ನಾಟಕ ಬ್ಯಾಂಕ್ ನ ಸಿ.ಇ.ಒ. ಮಹಾಬಲೇಶ್ವರ್ ಪ್ರಯೋಗಾಲಯವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಕಷ್ಟಪಟ್ಟು ಓದಬಾರದು ಆದರೆ ಇಷ್ಟಪಟ್ಟು ಓದಬೇಕು. ಜೊತೆಗೆ ಕೆಲಸ ಕಾರ್ಯದಲ್ಲಿ ಚಾತುರ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಭಾಗವಹಿಸಿದ್ದರು.
ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ಹಾಗೂ ಬೈಂದೂರು ಕ್ಷೇತ್ರದ ಶಾಸಕ ಬಿ.ಎಮ್. ಸುಕುಮಾರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾಲೇಜಿನ ವ್ಯವಸ್ಥಾಪನಾ ಸಮಿತಿಯ ಕಾರ್ಯದರ್ಶಿ ಕೆ. ಸೀತಾರಾಮ ನಕ್ಕತ್ತಾಯ, ಸದಸ್ಯ ಅರುಣ್ ಕುಮಾರ್ ಶೆಟ್ಟಿ, ಸುಧಾಕರ್ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪ್ರಾಂಶುಪಾಲ ಪ್ರೊ. ಕೆ. ಉಮೇಶ್ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು, ಉಪನ್ಯಾಸಕಿ ರೇಷ್ಮಾ ಶೆಟ್ಟಿ ನಿರೂಪಿಸಿದರು.