udupixpress
Home Trending ಭಾರತ್ ಸ್ಕೌಟ್ಸ್-ಗೈಡ್ಸ್ ವತಿಯಿಂದ ಕೊರೊನಾ ವಾರಿಯರ್ಸ್ ಗಳಿಗೆ ಅಭಿನಂದನೆ

ಭಾರತ್ ಸ್ಕೌಟ್ಸ್-ಗೈಡ್ಸ್ ವತಿಯಿಂದ ಕೊರೊನಾ ವಾರಿಯರ್ಸ್ ಗಳಿಗೆ ಅಭಿನಂದನೆ

ಉಡುಪಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉಡುಪಿ ಜಿಲ್ಲಾ ಸಂಸ್ಥೆಯ ಆಶ್ರಯದಲ್ಲಿ ಶಿಕ್ಷಕ ದಿನಾಚರಣೆಯ ಅಂಗವಾಗಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ಕೊರೊನಾ ವಾರಿಯರ್ಸ್ ಗಳಾಗಿ ಕರ್ತವ್ಯ ನಿರ್ವಹಿಸಿದ ಜಿಲ್ಲೆಯ ಕಬ್ಸ್ – ಬುಲ್ ಬುಲ್ಸ್ , ಸ್ಕೌಟ್ಸ್ – ಗೈಡ್ಸ್ , ರೋವರ್ಸ್ – ರೇಂಜರ್ಸ್ ಶಿಕ್ಷಕರನ್ನು ಇಂದು ಅಭಿನಂದಿಸಲಾಯಿತು.

ಜಿಲ್ಲೆಯ ಕಾರ್ಕಳ, ಉಡುಪಿ, ಕಾಪು, ಬ್ರಹ್ಮಾವರ, ಕುಂದಾಪುರ ಹಾಗೂ ಬೈಂದೂರು ವಲಯಗಳ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸಿದ ಶಿಕ್ಷಕರಿಗೆ ಪ್ರಮಾಣಪತ್ರ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಕೊರೊನಾ ವಾರಿಯರ್ಸ್ ಗಳ ಸೇವೆಯನ್ನು ಸ್ಮರಿಸಿದರು.

ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ , ಉಡುಪಿ ಜಿಲ್ಲಾ ಮುಖ್ಯ ಆಯುಕ್ತೆ ಶಾಂತಾ ವಿ. ಆಚಾರ್ಯ, ಜಿಲ್ಲಾ ಸ್ಕೌಟ್ ಆಯುಕ್ತ ಡಾ. ವಿಜಯೇಂದ್ರ ವಸಂತ್ ಹಾಗೂ ಜಿಲ್ಲಾ ಗೈಡ್ ಆಯುಕ್ತ ಜ್ಯೋತಿ ಜೆ. ಪೈ ಶುಭಾಹಾರೈಸಿದರು. ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಯ ಅಧ್ಯಕ್ಷರು, ಪದಾಧಿಕಾರಿಗಳು, ಸ್ಥಳೀಯ ಸಂಸ್ಥೆ ಪದಾಧಿಕಾರಿಗಳು ಮೊದಲಾದವರು ಉಪಸ್ಥಿತರಿದ್ದರು.

error: Content is protected !!