ಉಡುಪಿ-ಚಿಕ್ಕಮಗಳೂರು ಕಾಂಗ್ರೆಸ್ ಅಭ್ಯರ್ಥಿ ಜೆ.ಪಿ ಹೆಗ್ಡೆ ಬಿರುಸಿನ ಪ್ರಚಾರ; ದೇಗುಲ ಭೇಟಿ

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕೆ.ಜಯಪ್ರಕಾಶ್‌ ಹೆಗ್ಡೆ ಅವರು ಗುರುವಾರ (ಏ.18) ವಿವಿಧೆಡೆ ಭೇಟಿ ನೀಡಿ ಮತಯಾಚಿಸಿದರು.

ಈ ಸಂದರ್ಭದಲ್ಲಿ ಕುಕ್ಕೆಹಳ್ಳಿ ಶ್ರೀ ಮಹಾಲಿಂಗೇಶ್ವರ ದೇವಾಲಯ, ಪೆರ್ಡೂರು ಶ್ರೀ ಅನಂತ ಪದ್ಮನಾಭ ದೇವಾಲಯ, ಕಟಪಾಡಿಯ ಕೋಟೆ ಗ್ರಾಮದ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಕಾಪು ಕ್ಷೇತ್ರದ ಕುಕ್ಕೆಹಳ್ಳಿ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು. ಓಜೋನ್ ಕ್ಯಾಷ್ಯು ಇಂಡಸ್ಟ್ರಿಯಲ್ಲಿ ಮತಯಾಚನೆ ಮಾಡಿದರು.

ಕಟಪಾಡಿಯ ಕೋಟೆ ಗ್ರಾಮದ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನ, ಕಟಪಾಡಿಯ ಪೇಟೆಬೆಟ್ಟುವಿನಲ್ಲಿರು ಕೊರಗಜ್ಜ ಸನ್ನಿಧಿ, ಪೆರ್ಡೂರು ಅನಂತ ಪದ್ಮನಾಭ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.